ಒಡಿಶಾ:- ಯುವತಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ಜರುಗಿದೆ.
Advertisement
ಮೃತಳನ್ನು ಪ್ರಿಯಾ ಕುಮಾರಿ ಮೊಹರಾನ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಲಂಜಿಪಲ್ಲಿ ಪ್ರದೇಶದ ನಿವಾಸಿ 24 ವರ್ಷದ ಅಭಯ ಕುಮಾರ್ ಮೊಹರಾನ ಎಂದು ಗುರುತಿಸಲಾಗಿದೆ. ಆಕೆಯನ್ನು ಕೊಲೆ ಮಾಡಿದ ನಂತರ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ಕೊಲೆಗೆ ಕಾರಣವನ್ನು ನಾವು ಪರಿಶೀಲಿಸುತ್ತಿದ್ದೇವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ” ಎಂದು ಬೆರ್ಹಾಂಪುರ ಎಸ್‌ಪಿ ತಿಳಿಸಿದ್ದಾರೆ. ಈ ಜೋಡಿ ಒಟ್ಟು 3 ಬಾರಿ ಇದೇ ಲಾಡ್ಜ್‌ಗೆ ಹೋಗಿದ್ದಾರೆ ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ.