ಗದಗ: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗ್ರಾಮವೊಂದರಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದಾಳೆ. ಯುವಕ ದೇವಪ್ಪ ಅಲಿಯಾಸ್ ಮುತ್ತು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Advertisement
ಈ ಇಬ್ಬರ ಪ್ರೀತಿಗೆ ಬಾಲಕಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದ ಪ್ರೇಮಿಗಳಿಬ್ಬರು ಜಮೀನಿನಲ್ಲಿ ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಸ್ಥಳೀಯರು ಕೂಡಲೇ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಬಾಲಕಿಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾಳೆ. ಯುವಕ ಈಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.