ಪುಣೆ: ಪುಣೆಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಪ್ರೇಯಸಿ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ನದಿಗೆ ಎಸೆದು ಅಮಾನವೀಯವಾಗಿ ವರ್ತಿಸಿದ್ದಾನೆ.
25 ವರ್ಷದ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಜೀವನ ನಡೆಸುತ್ತಿದ್ದಳು, ಈಗ ಆಕೆ ಗರ್ಭಿಣಿಯಾಗದ್ದಳು, ವ್ಯಕ್ತಿಗೆ ಮಗು ಇಷ್ಟವಿರಲಿಲ್ಲ ಹೀಗಾಗಿ ಆಕೆಗೆ ಗರ್ಭಪಾತ ಮಾಡಿಸುವ ದೃಷ್ಟಿಯಿಂದ ಆಸ್ಪತ್ರೆಗೆ ಕರೆದೊಯ್ದಿದ್ದ. ಆಗ ಆಕೆ ಸಾವನ್ನಪ್ಪಿದ್ದಾಳೆ.
ಮೃತ ಮಹಿಳೆ ತಾಯಿ ತನ್ನ ಮಗಳು ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಕ್ಕಳನ್ನೂ ಕೊಂದಿರುವ ವಿಚಾರ ಬಾಯ್ಬಿಟ್ಟಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.









