ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯ ಸೋಲೂರು ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಾಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಕುದೂರು ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಟೋಲ್ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯ ನಡೆಸಿದರು. ಬಳಿಕ ಎರಡು ಕ್ರೇನ್‌ಗಳ ಸಹಾಯದಿಂದ ಪಲ್ಟಿಯಾದ ಟ್ಯಾಂಕರ್ ಅನ್ನು ತೆರವುಗೊಳಿಸಲಾಗಿದೆ.
ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೆ ಜಾಗ್ರತೆಯಿಂದ ಟ್ಯಾಂಕರ್ ಅನ್ನು ಮೇಲಕ್ಕೆ ಎತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



