HomeIndia NewsLPG ಕೊರತೆ ಆತಂಕ: ಪೆಟ್ರೋಲಿಯಂ, ವಿದೇಶಾಂಗ ಸಚಿವರೊಂದಿಗೆ ಪ್ರಧಾನಿ ಮೋದಿ ಸಭೆ

LPG ಕೊರತೆ ಆತಂಕ: ಪೆಟ್ರೋಲಿಯಂ, ವಿದೇಶಾಂಗ ಸಚಿವರೊಂದಿಗೆ ಪ್ರಧಾನಿ ಮೋದಿ ಸಭೆ

For Dai;y Updates Join Our whatsapp Group

Spread the love

ನವದೆಹಲಿ: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಕೊರತೆಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳಿಂದ ದೇಶೀಯ ಗ್ರಾಹಕರನ್ನು ರಕ್ಷಿಸಲು ಸರ್ಕಾರ ಕಾರ್ಯತಂತ್ರದ ಯೋಜನೆಯನ್ನು ಸಕ್ರಿಯಗೊಳಿಸಿದೆ ಎಂದು ತಿಳಿದುಬಂದಿದೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಮಿಲಿಟರಿ ಕ್ರಮಗಳು ಹಾಗೂ ಟೆಹ್ರಾನ್‌ನ ಪ್ರತೀಕಾರ ದಾಳಿಗಳ ನಂತರ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಈ ಬೆಳವಣಿಗೆದಿಂದ ಇಂಧನ ಪೂರೈಕೆಯಲ್ಲಿ ಬಿಕ್ಕಟ್ಟು ಉಂಟಾಗಿದೆ.

ಹಾರ್ಮುಜ್ ಜಲಸಂಧಿ ಭಾರತದ ಇಂಧನ ಭದ್ರತೆಗೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಭಾರತ ತನ್ನ ಒಟ್ಟು ಎಲ್‌ಪಿಜಿ ಅವಶ್ಯಕತೆಗಳಲ್ಲಿ ಸುಮಾರು ಶೇ.62 ರಷ್ಟು ಆಮದು ಮಾಡಿಕೊಳ್ಳುತ್ತದೆ.

ಸೌದಿ ಅರೇಬಿಯಾ ಸೇರಿದಂತೆ ಹಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಎಲ್‌ಪಿಜಿಯಲ್ಲೂ ಶೇ.85 ರಿಂದ ಶೇ.90 ರಷ್ಟು ಪೂರೈಕೆ ಇದೇ ಜಲಸಂಧಿಯ ಮೂಲಕ ಸಾಗುತ್ತದೆ. ಇದೀಗ ಈ ಮಾರ್ಗ ನಿರ್ಬಂಧಿತವಾಗಿರುವುದರಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಪೂರೈಕೆ ಮೂಲಗಳನ್ನು ಹುಡುಕುತ್ತಿದ್ದು, ತಕ್ಷಣದ ಕೊರತೆಯನ್ನು ಎದುರಿಸಲು ಲಭ್ಯವಿರುವ ಎಲ್‌ಪಿಜಿ ದಾಸ್ತಾನುಗಳಿಗೆ ಕಟ್ಟುನಿಟ್ಟಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!