ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಎಂ.ಎ.ಸಲೀಂ ನೇಮಕ!

0
Spread the love

ಬೆಂಗಳೂರು:- ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಮೋಹನ್ ಅವರು ಏ.30ರಂದು ನಿವೃತ್ತರಾಗಿದ್ದರು. ಮೇ 21 ರ ವರೆಗೆ ಅವರ ಅವಧಿಯನ್ನು ಸರ್ಕಾರ ವಿಸ್ತರಿಸಿತ್ತು. ಕೇಂದ್ರ ಲೋಕಸೇವಾ ಆಯೋಗದಿಂದ ಮೂವರು ಶಾರ್ಟ್ ಲಿಸ್ಟ್ ಬಾರದ ಹಿನ್ನೆಲೆ ಪೂರ್ಣಾವಧಿ ಡಿಜಿ/ಐಜಿಪಿ ಆದೇಶ ಮಾಡದೇ ಸರ್ಕಾರ ಹೆಚ್ಚುವರಿ ಹೊಣೆ ಆದೇಶ ಮಾಡಿದೆ. ತಾಂತ್ರಿಕ ಸಮಸ್ಯೆ, ಕಾನೂನು ಅಡ್ಡಿ ಹಿನ್ನೆಲೆಯಲ್ಲಿ ಸರ್ಕಾರ ಜಾಣ ನಡೆ ಅನುಸರಿಸಿದೆ.

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here