ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಇಲ್ಲಿನ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಕೆ. ಲಮಾಣಿಯವರ ಸೇವೆಯನ್ನು ಗುರುತಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ರಾಜ್ಯಮಟ್ಟದ `ಶ್ರೇಷ್ಠ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು.
ಅದರಂತೆ ಗುರುವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಂ.ಕೆ. ಲಮಾಣಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಂ.ಕೆ. ಲಮಾಣಿ, ಕೆಪಿಸಿಸಿ ಶಿಕ್ಷಕರ ರಾಜ್ಯ ಘಟಕವು ನನ್ನ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿರುವುದು ನನ್ನ ಸೇವಾ ಅವಧಿಯಲ್ಲಿ ತೃಪ್ತಿ ತಂದಿದ್ದು, ಈ ಹಿಂದೆ ತಾಲೂಕಾ ಕಸಾಪ ಅಧ್ಯಕ್ಷರಾಗಿ ನಾಡು-ನುಡಿಯ ರಕ್ಷಣೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಜೊತೆಗೆ ಮಾಧ್ಯಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬರಲಾಗುತ್ತಿದೆ ಎಂದರು.