ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಲಕ್ಷ್ಮೇಶ್ವರ ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಎಸ್. ಹಿರೇಮಠ ಆಯ್ಕೆಯಾಗಿದ್ದಾರೆ.
ಹಿರೇಮಠ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಎಂ.ಎಸ್. ಹಿರೇಮಠ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.

