ಬೆಂಗಳೂರು: ಮಚ್ಚು ಹಿಡಿದು ರಸ್ತೆಯಲ್ಲಿ ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ 24ನೇ ACJM ಕೋರ್ಟ್ ಇಬ್ಬರು ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಜತ್ ಕಿಶನ್ ಅವರು ಮತ್ತೆ 2ನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಇಂದು ವಿನಯ್ ಹಾಗೂ ರಜತ್ ಇಬ್ಬರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ಕೇಸ್ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಆರೋಪಿಗಳ ಈ ಹಿಂದಿನ ವಾರೆಂಟ್ ರೀ ಕಾಲ್ ಮಾಡಲಾಗಿದ್ದು, ರಜತ್ ಕಿಶನ್ ಮತ್ತೆ ಜೈಲು ಸೇರುವಂತಾಗಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ ಸಂಬಂಧ ಬಸವೇಶ್ವರ ನಗರ ಪೊಲೀಸರು ಇಂದು ರಜತ್ ಕಿಶನ್ ನೋಟಿಸ್ ನೀಡಿದ್ದರು. ನೋಟಿಸ್ ಹಿನ್ನೆಲೆಯಲ್ಲಿ ರಜತ್ ಇಂದು ಮತ್ತೆ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಈ ವೇಳೆ ತನಿಖೆ ನಡೆಸಿದ ಪೊಲೀಸರು ಮತ್ತೆ ರಜತ್ ರನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಆರೋಪಿ ರಜತ್‌ರನ್ನು ಬಂಧಿಸಿದ ಪೊಲೀಸರು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕೋರ್ಟ್‌ಗೆ ವಿಚಾರಣೆಗೆ ಹಾಜರುಪಡಿಸಲಾಯಿತು. ಈ ಕೇಸ್ ವಿಚಾರಣೆ ನಡೆಸಿದ ಕೋರ್ಟ್ ರಜತ್ ಅವರಿಗೆ ಏಪ್ರಿಲ್ 29ನೇ ತಾರೀಖಿನವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.