ಬೆಳಗಾವಿಯ ಕೆ.ಎಲ್.ಇ ಮೆಡಿಕಲ್ ಕಾಲೇಜಿನಲ್ಲಿ ಜರುಗಿದ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ಒಕ್ಕೂಟದ ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಅವರನ್ನು ಒಕ್ಕೂಟದ ಪರವಾಗಿ ಮಾಜಿ ಸಚಿವ ಎಸ್.ಎಸ್. ಪಾಟೀಲ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿ.ಪ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಅರುಣ್ ಶಹಾಪೂರ, ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಜ. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Advertisement