ಬೆಂಗಳೂರು:- ಮಧ್ಯಪ್ರದೇಶ ಮುಖ್ಯಂತ್ರಿ ಡಾ. ಮೋಹನ್ ಯಾದವ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ.
ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನಲ್ಲಿ ಮೂರನೇ ಸಂವಾದಾತ್ಮಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಉತ್ತೇಜಿಸಲು ನಾಳೆ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳಿನ ಸಭೆಯಲ್ಲಿ ಸರ್ಕಾರದ ದೃಷ್ಟಿಕೋನ ಮತ್ತು ನಾವೀನ್ಯತೆಗಳನ್ನು ಎತ್ತಿ ತೋರಿಸುವ ಕೈಗಾರಿಕೋದ್ಯಮಿಗಳನ್ನು ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಭೇಟಿ ಮಾಡಿ ಹೂಡಿಕೆ ಸಂಬಂಧ ಮಹತ್ವದ ಚರ್ಚೆ ಮಾಡಲಿದ್ದಾರೆ. ಇನ್ನು ಇದೇ ಸಭೆಯಲ್ಲಿ ಮಧ್ಯಪ್ರದೇಶದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕೈಗಾರಿಕೋದ್ಯಮಿಗಳೊಂದಿಗೆ ಮೋಹನ್ ಯಾದವ್ ಅವರು ಮಾತುಕತೆ ನಡೆಸಿ ವಿವಿಧ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.