ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಸವೇಶ್ವರ ನಗರದ ಶ್ರೀ ವರಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 133ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಾಗೂ ಮಂಡಳಿಯ 27ನೇ ವರ್ಷದ ಗಜಾನನೋತ್ಸವ-2025 ಅಂಗವಾಗಿ ಆಗಸ್ಟ್ 29ರ ಮುಂಜಾನೆ 10ಕ್ಕೆ ಲೋಕ ಕಲ್ಯಾಣಾರ್ಥವಾಗಿ ಸಹಸ್ರ ಮೋದಕ ಹೋಮ ಹಾಗೂ ಮಧ್ಯಾಹ್ನ 1.30ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅವಳಿ ನಗರದ ಸಕಲ ಸದ್ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಮಂಡಳಿಯ ಅಧ್ಯಕ್ಷ ರಾಜು ರೊಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.



