HomeGadag Newsಗದಗದ ತ್ರಿಕೂಟೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ವೈಭವ; ಹರಿದು ಬಂದ ಭಕ್ತ ಸಾಗರ!

ಗದಗದ ತ್ರಿಕೂಟೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ವೈಭವ; ಹರಿದು ಬಂದ ಭಕ್ತ ಸಾಗರ!

For Dai;y Updates Join Our whatsapp Group

ಗದಗ:- ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಸಂಭ್ರಮ ಮನೆಮಾಡಿದೆ.

ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಭಕ್ತರ ಸಂಚಾರ ಜೋರಾಗಿದೆ. ಅನೇಕ ಪೂಜೆ–ಪುನಸ್ಕಾರಗಳು ಭಕ್ತಿ ಭಾವದೊಂದಿಗೆ ನೆರವೇರಿಸುತ್ತಿದ್ದು, ಸಾವಿರಾರು ಭಕ್ತರು ಶ್ರೀ ತ್ರಿಕೂಟೇಶ್ವರನ ದರ್ಶನ ಪಡೆದು ಧನ್ಯರಾಗುತ್ತಿದ್ದಾರೆ.

ಈ ದೇವಾಲಯದ ವಿಶೇಷತೆ ಎಂದರೆ ಒಂದೇ ಪಾಣಿಬಟ್ಟಲಿನಲ್ಲಿ ಬ್ರಹ್ಮ–ವಿಷ್ಣು–ಮಹೇಶ್ವರ ತತ್ವಗಳನ್ನು ಪ್ರತಿನಿಧಿಸುವ ಸೃಷ್ಟಿ, ಸ್ಥಿತಿ, ಲಯ ರೂಪದ ತ್ರಿಲಿಂಗ ಉದ್ಭವ ಲಿಂಗಗಳು ವಿರಾಜಮಾನವಾಗಿವೆ. ಜೊತೆಗೆ ಸಾವಿತ್ರಿ–ಸರಸ್ವತಿ–ಗಾಯತ್ರಿ ದೇವತೆಗಳು ಒಂದೇ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿತವಾಗಿರುವುದು ಅಪರೂಪದ ವೈಶಿಷ್ಟ್ಯವಾಗಿದೆ. ಇದೇ ಕಾರಣಕ್ಕೆ ಗದಗ ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಭಕ್ತರು ಹರಿದುಬರುತ್ತಿದ್ದಾರೆ.

ಮಹಾ ಶಿವರಾತ್ರಿ ಅಂಗವಾಗಿ ಬಿಲ್ವಾರ್ಚನೆ, ಕ್ಷೀರಾಭಿಷೇಕ, ಎಳೆನೀರು ಅಭಿಷೇಕ, ರುದ್ರಾಭಿಷೇಕ, ಲಘು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಯಾಮ ಪೂಜೆ ಹಾಗೂ ಮಹಾ ಮಂಗಳಾರತಿ ಸೇರಿದಂತೆ ಹಲವು ವಿಶೇಷ ಪೂಜೆಗಳು ನಡೆಯಲಿವೆ.

ಸದ್ಯ ದೇವಸ್ಥಾನದ ಆವರಣದಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿರುವ ದೃಶ್ಯಗಳು ಕಾಣಿಸುತ್ತಿವೆ. ಶಿವನಾಮ ಸ್ಮರಣೆಯೊಂದಿಗೆ ಗದಗ ನಗರದಲ್ಲಿ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img