• About
  • Advertise
  • Privacy & Policy
  • Contact
Sunday, November 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಮಹದಾಯಿ ಯೋಜನೆ ಕಾಮಗಾರಿ ಶೀಘ್ರವೇ ಪ್ರಾರಂಭ ಮಾಡುತ್ತೇವೆ: ಡಿಕೆ. ಶಿವಕುಮಾರ್

Vijaya Sakshi News Desk by Vijaya Sakshi News Desk
July 24, 2025
in Karnataka News
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ
0
SHARES
0
VIEWS
Share on Facebook

ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು” ಎಂದರು.

ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು

“ಈ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡುತ್ತೇನೆ. ಇದು ನಮ್ಮ ರಾಜ್ಯದ ಸ್ವಾಭಿಮಾನದ ಪ್ರಶ್ನೆ. ಈ ವಿಚಾರದಲ್ಲಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿರುವುದೇ ದೊಡ್ಡ ತಪ್ಪು. ನಮ್ಮ ರಾಜ್ಯದ 28 ಲೋಕಸಭೆ ಸದಸ್ಯರು, 12 ರಾಜ್ಯಸಭೆ ಸದಸ್ಯರು ಒಗ್ಗಟ್ಟಿನಿಂದ ಹೋರಾಡಿ ರಾಜ್ಯದ ಗೌರವ ಕಾಪಾಡಬೇಕಾಗಿದೆ. ಗೋವಾದ ಕೇವಲ ಒಂದು ಸಂಸದರಿಗಾಗಿ ನಮ್ಮ ಕರ್ನಾಟಕವನ್ನು ಮಾರಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಸಂಸದರು,

ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸರಕಾರದ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಬೇಕು. ನಾನು ಕೂಡ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೇಳುತ್ತೇನೆ. ಎಲ್ಲಾ ಸಂಸದರ ನಿಯೋಗವನ್ನು ಕರೆದೊಯ್ಯುವ ಪ್ರಯತ್ನ ಮಾಡುತ್ತೇನೆ. ನಮ್ಮ ಜೊತೆ ಎಲ್ಲರೂ ಬರುವ ನಂಬಿಕೆ ಇದೆ. ಯಾರು ಬರುತ್ತಾರೋ ಬಿಡುತ್ತಾರೋ ನಮ್ಮ ಕೆಲಸ ನಾವು ಮಾಡುತ್ತೇವೆ” ಎಂದು ತಿಳಿಸಿದರು.

ಸರ್ವಪಕ್ಷ ಸಭೆ ಕರೆಯುತ್ತೀರಾ ಎಂದು ಕೇಳಿದಾಗ, “ಎಲ್ಲಾ ಪಕ್ಷಗಳ ಸಂಸದರ ಸಭೆ ಕರೆಯುವುದಾಗಿ ಹೇಳಿದ್ದೇನೆ” ಎಂದರು. ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ದಾರಿ ತಪ್ಪಿಸುತ್ತಿದ್ದಾರಾ ಎಂದು ಕೇಳಿದಾಗ, “ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿದ್ದಾರೆ. ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ಅವರನ್ನು ಐದಾರು ಬಾರಿ ಈ ವಿಚಾರಕ್ಕಾಗಿ ಭೇಟಿ ಮಾಡಿದ್ದೇನೆ. ಕೇಂದ್ರ ಅರಣ್ಯ ಸಚಿವರು ಕೂಡ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ಕೆಲಸಕ್ಕೆ ಬೆಂಬಲವಾಗಿದ್ದಾರೆ. ಎಲ್ಲಾ ಸಮಸ್ಯೆ ಇರುವುದು ಗೋವಾದಲ್ಲಿ” ಎಂದು ಕಿಡಿಕಾರಿದರು.

Tags: BreakingNewsdkshivakumarKannadaLatestNewsKarnatakamahadayi yojaneVijayasakshivijayasakshinews
ShareSendShare
Previous Post

ಪವನ್ ಕಲ್ಯಾಣ್ ಚಿತ್ರದ ಪೋಸ್ಟರ್ ವಿರುದ್ಧ ಕೆರಳಿದ ಕನ್ನಡಿಗರು: ಬ್ಯಾನರ್‌ ಹರಿದು ಆಕ್ರೋಶ

Next Post

ರಾಷ್ಟ್ರದಲ್ಲಿ ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ: ಕೆ.ಜೆ.ಜಾರ್ಜ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ರಾಷ್ಟ್ರದಲ್ಲಿ ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ: ಕೆ.ಜೆ.ಜಾರ್ಜ್!

ರಾಷ್ಟ್ರದಲ್ಲಿ ಚುನಾವಣಾ ಆಯೋಗ ಸರಿಯಾಗಿ ಕೆಲಸ ಮಾಡ್ತಿಲ್ಲ: ಕೆ.ಜೆ.ಜಾರ್ಜ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
2 ಕೋಟಿ ರೂ. ವಂಚನೆ ಕೇಸ್‌ನಲ್ಲಿ ನಕಲಿ ಔಷಧ ದಂಧೆಯ ಆರೋಪಿ ಪ್ರಶಾಂತ್ ಅರೆಸ್ಟ್!

2 ಕೋಟಿ ರೂ. ವಂಚನೆ ಕೇಸ್‌ನಲ್ಲಿ ನಕಲಿ ಔಷಧ ದಂಧೆಯ ಆರೋಪಿ ಪ್ರಶಾಂತ್ ಅರೆಸ್ಟ್!

November 22, 2026
ಚಿನ್ನ ಖರೀದಿಗೆ ಇದೇ ಗೋಲ್ಡನ್ ಟೈಮ್! ಜನವರಿ ಬಳಿಕ ಬಂಗಾರದ ಬೆಲೆ ಮತ್ತೆ ಏರಿಕೆ? ಟಿ.ಎ. ಶರವಣ ಭವಿಷ್ಯ

ಚಿನ್ನ ಖರೀದಿಗೆ ಇದೇ ಗೋಲ್ಡನ್ ಟೈಮ್! ಜನವರಿ ಬಳಿಕ ಬಂಗಾರದ ಬೆಲೆ ಮತ್ತೆ ಏರಿಕೆ? ಟಿ.ಎ. ಶರವಣ ಭವಿಷ್ಯ

November 22, 2026
ಚಿನ್ನ ಖರೀದಿಸುವವರಿಗೆ ಬಂಪರ್ ಗುಡ್ ನ್ಯೂಸ್! ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ, ಇಂದಿನ ದರ ಎಷ್ಟಿದೆ ಗೊತ್ತಾ?

ವಾರಾಂತ್ಯದಲ್ಲೂ ಕುಸಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲೂ ಇಳಿಕೆ, ಇಲ್ಲಿದೆ ಲೇಟೆಸ್ಟ್ ರೇಟ್!

November 22, 2026
ತಿರುಪತಿಯಲ್ಲಿ ಒಂದು ತಿಂಗಳಲ್ಲೇ 129.45 ಕೋಟಿ ಕಾಣಿಕೆ ಸಂಗ್ರಹ!

ಷೇರು ಮಾರಾಟದ ಯಶಸ್ಸಿಗೆ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಹರಕೆ; ಈಡೇರಿಸಲು ಸಜ್ಜಾದ ಉದ್ಯಮಿ!

November 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

2 ಕೋಟಿ ರೂ. ವಂಚನೆ ಕೇಸ್‌ನಲ್ಲಿ ನಕಲಿ ಔಷಧ ದಂಧೆಯ ಆರೋಪಿ ಪ್ರಶಾಂತ್ ಅರೆಸ್ಟ್!

2 ಕೋಟಿ ರೂ. ವಂಚನೆ ಕೇಸ್‌ನಲ್ಲಿ ನಕಲಿ ಔಷಧ ದಂಧೆಯ ಆರೋಪಿ ಪ್ರಶಾಂತ್ ಅರೆಸ್ಟ್!

November 22, 2026
ಚಿನ್ನ ಖರೀದಿಗೆ ಇದೇ ಗೋಲ್ಡನ್ ಟೈಮ್! ಜನವರಿ ಬಳಿಕ ಬಂಗಾರದ ಬೆಲೆ ಮತ್ತೆ ಏರಿಕೆ? ಟಿ.ಎ. ಶರವಣ ಭವಿಷ್ಯ

ಚಿನ್ನ ಖರೀದಿಗೆ ಇದೇ ಗೋಲ್ಡನ್ ಟೈಮ್! ಜನವರಿ ಬಳಿಕ ಬಂಗಾರದ ಬೆಲೆ ಮತ್ತೆ ಏರಿಕೆ? ಟಿ.ಎ. ಶರವಣ ಭವಿಷ್ಯ

November 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper