ಕಳೆದೊಂದು ವಾರದಿಂದ ಸೋಷಿಯಲ್ ಮೀಡಿಯಾದಲ್ಲಿ ಮಿಂಚುತ್ತಿರುವ ಕುಂಬಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೋನಾಲಿಸಾಗೆ ಬಾಲಿವುಡ್ ನಿಂದ ಬಿಗ್ ಆಫರ್ ಬಂದಿದೆ. ಸ್ಟಾರ್ ನಿರ್ದೇಶಕನ ಸಿನಿಮಾದಲ್ಲಿ ನಟಿಸಲು ಮೋನಾಲಿಸಾಗೆ ಬುಲಾವ್ ಬಂದಿದೆ.
ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿಯೊಬ್ಬಾಕೆಯ ಚಿತ್ರವೊಂದು ಸಖತ್ ವೈರಲ್ ಆಗಿತ್ತು. ಆಕೆಯ ಸೌಂದರ್ಯಕ್ಕೆ ವಿಶೇಷವಾಗಿ ಆಕೆಯ ಸೆಳೆಯುವ ಕಣ್ಣುಗಳಿಗೆ ಜನ ಮಾರು ಹೋಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಆಕೆಯ ಜೊತೆ ಸೆಲ್ಪಿಗೆ ಜನ ಮುಗಿ ಬೀಳಲು ಶುರು ಮಾಡಿದರು. ಇದೀಗ ಬಾಲಿವುಡ್ ಕಣ್ಣು ಆಕೆಯ ಮೇಲೆ ಬಿದಿದ್ದು ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಆಫರ್ ಬಂದಿದೆಯಂತೆ.
ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ವೈರಲ್ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾ ಅನ್ನು ಸನೋಜ್ ಮಿಶ್ರ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ವೈರಲ್ ಹುಡುಗಿಯೇ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ಸಹ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದು ಮಾತ್ರವೇ ಅಲ್ಲದೆ ಮಹಾಕುಂಭದ ಮೊನಾಲಿಸಾಗೆ ನಟನಾ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆಯಂತೆ.