ಬೆಂಗಳೂರು: ಮಹಾರಾಷ್ಟ್ರ ಪೊಲೀಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಡ್ರಗ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಿದ್ದಾರೆ.
ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ನಡೆಸುತ್ತಿದ್ದ ಈ ಫ್ಯಾಕ್ಟರಿಗಳಲ್ಲಿ 55.88 ಕೆಜಿ ಮೌಲ್ಯದ ಡ್ರಗ್ ವಶಕ್ಕೆ ಪಡೆದಿದ್ದಾರೆ. ಮುಂಬೈನಲ್ಲಿ ದಾಳಿ ನಡೆಸಿದ ಮಹಾರಾಷ್ಟ್ರ ಪೊಲೀಸರು ಅಬ್ದುಲ್ ಖಾದಿರ್ ಶೇಕ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕರ್ನಾಟಕ ಲಿಂಕ್ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಡ್ರಗ್ ಮಾಫಿಯಾ ತಂಡ ನಗರದಲ್ಲಿ ಡ್ರಗ್ ತಯಾರಿಸಿ ಬೇರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿತ್ತು. ಅಲ್ಲದೇ ಅಪಾರ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡುತ್ತಿತ್ತು. ಸದ್ಯ ಬೆಂಗಳೂರು ಪೊಲೀಸರು ಮಹಾರಾಷ್ಟ್ರ ಪೊಲೀಸರ ಮಾಹಿತಿಯ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ.



