ವಿಜಯಸಾಕ್ಷಿ ಸುದ್ದಿ, ಗದಗ : ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಹಾಗೂ ಶ್ರೀ ತೋಂಟದ ಸಿದ್ಧೇಶ್ವರ ಪ.ಪೂ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಸಿದ್ಧೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ವಾಯ್.ಎಸ್. ಮತ್ತೂರ ಅವರು ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿ, ಸಾಮಾನ್ಯ ವ್ಯಕ್ತಿಯೊಬ್ಬ ಶ್ರದ್ಧೆ ಮತ್ತು ಸಜ್ಜನಿಕೆಯ ಗುಣಗಳಿಂದ ಪರಿವರ್ತನೆ ಹೊಂದಿ ಜಗತ್ತಿಗೆ ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯವನ್ನು ಕೊಡುಗೆ ನೀಡುವುದರ ಮೂಲಕ ಜೀವನ ಮೌಲ್ಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಪಾಲಿಸಬೇಕೆಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಮಹಾವಿದ್ಯಾಲಯಗಳ ಪ್ರಾಚಾರ್ಯರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರೊ. ಶಿಲ್ಪಾ ಮ್ಯಾಗೇರಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.