ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

0
Spread the love

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಹೆಸರು ಇಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು.

Advertisement

ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ, ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ” ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಈ ಮೂಲಕ ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ‌ ಮಕ್ಕಳಾದ ಲವ, ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿ. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ” ಎಂದು ಸಿಎಂ ಹೇಳಿದರು.


Spread the love

LEAVE A REPLY

Please enter your comment!
Please enter your name here