ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು ಬ್ರಹ್ಮವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ಪೊಲೀಸರು ಇಂದು ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಆಗಮಿಸಿದ್ದರು. ಬಳಿಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪದ ಮೇಲೆ ಈಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.