ಮಂಗಳೂರು:- ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್ ಎದುರಾಗಿದ್ದು, ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಹಾಗೂ ನೇತ್ರಾವತಿ ನದಿ ತೀರದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಮಹೇಶ್ ಶೆಟ್ಟಿ ತಿಮರೋಡಿ ಆಶ್ರಯ ನೀಡಿದ್ದರು. ಇನ್ನು ತಿಮರೋಡಿ ಗಡಿಪಾರಿನ ಬಗ್ಗೆ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲಾ ವರ್ಗೀಸ್ ಆದೇಶ ಮಾಡಿದ್ದಾರೆ. ಒಟ್ಟು 32 ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಯಾಗಿದ್ದು, ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.



