HomeBengaluru Newsಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ದುರ್ಬಳಕೆಯನ್ನು ತಡೆಯಲು ಮಹತ್ವದ ಪರಿಷ್ಕರಣೆ ಕ್ರಮಕ್ಕೆ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯ ಬಳಿಕ ಇದೀಗ ಗೃಹಜ್ಯೋತಿ ಯೋಜನೆಯಲ್ಲಿಯೂ ಬದಲಾವಣೆ ತರಲು ಸರ್ಕಾರ ಸಿದ್ಧತೆ ನಡೆಸಿದೆ.

ಪ್ರಸ್ತುತ ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಈ ಸೌಲಭ್ಯವನ್ನು ದುರುಪಯೋಗ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ವಿಶೇಷವಾಗಿ ವಾಣಿಜ್ಯ ಬಳಕೆಗೆ ಗೃಹಬಳಕೆ ಹೆಸರಿನಲ್ಲಿ ಉಚಿತ ವಿದ್ಯುತ್ ಬಳಸಲಾಗುತ್ತಿರುವುದು ಹಾಗೂ ಹೊರರಾಜ್ಯದ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಆಧಾರ್, ಇ-ಕೆವೈಸಿ ಮತ್ತು ಮೊಬೈಲ್ ನಂಬರ್ ಆಧಾರಿತ ಮರುಪರಿಶೀಲನೆ ಪ್ರಕ್ರಿಯೆ ಆರಂಭಿಸಲು ತಯಾರಿ ನಡೆಯುತ್ತಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಪರಿಶೀಲನೆ ವ್ಯವಸ್ಥೆ ಜಾರಿಗೆ ತರಲು ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಪ್ರತಿ ತಿಂಗಳು ಸುಮಾರು 440 ಕೋಟಿ ರೂ. ವೆಚ್ಚ ಮಾಡುತ್ತಿದ್ದು, ರಾಜ್ಯದ ಸುಮಾರು 1.70 ಕೋಟಿ ಕುಟುಂಬಗಳು ಈ ಯೋಜನೆಯ ಲಾಭ ಪಡೆಯುತ್ತಿವೆ. ಆದ್ದರಿಂದ ಫಲಾನುಭವಿಗಳ ನಿಖರ ಗುರುತಿಗಾಗಿ ಮಾನದಂಡಗಳನ್ನು ಕಠಿಣಗೊಳಿಸುವ ಸಾಧ್ಯತೆ ಇದೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿ, “ವೋಟು ಹೊಂದಿರುವವರಿಗೆ ಮಾತ್ರ ಗ್ಯಾರಂಟಿ ನೀಡಬೇಕು” ಎಂದು ಹೇಳಿದ್ದಾರೆ. ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಸೌಲಭ್ಯ ತಲುಪಬೇಕು ಎಂದು ಅವರು ತಿಳಿಸಿದ್ದಾರೆ.

ಇನ್ನು ಬಿಜೆಪಿ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಲಾಭ ದೊರೆಯುವಂತೆ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img