HomeVijayanagarನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಆಸ್ತಿಗಾಗಿ ಪ್ರಿಯಕರನೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗಳು

ನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಆಸ್ತಿಗಾಗಿ ಪ್ರಿಯಕರನೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗಳು

For Dai;y Updates Join Our whatsapp Group

ವಿಜಯಪುರ: ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣದ ತನಿಖೆ ಪೊಲೀಸರನ್ನೇ ಬೆಚ್ಚಿಬೀಳಿಸುವಂತಹ ಸತ್ಯವನ್ನು ಬಯಲಿಗೆಳೆದಿದೆ. ಆಸ್ತಿ ವಿಚಾರದ ಜಗಳ ಹಾಗೂ ವೈಯಕ್ತಿಕ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪುತ್ರಿಯೇ ಪ್ರಿಯಕರನ ಜೊತೆ ಸೇರಿ ತಂದೆಯನ್ನು ಹತ್ಯೆ ಮಾಡಿದ್ದಾಳೆ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ಸಿದ್ದಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

ಆದರೆ ಮೃತರ ಹಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಮುಂದುವರಿಸಿದಾಗ ಪ್ರಕರಣದ ದಿಕ್ಕೇ ಬದಲಾಗಿದೆ. ಸಿದ್ದಪ್ಪ ಅವರ ಪುತ್ರಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಸಂತೋಷ್ ಸಿಂಧೆ ಬಂಧಿತರಾಗಿದ್ದಾರೆ. ಮತ್ತೋರ್ವ ಆರೋಪಿ ಗುರುರಾಜ ಬಿರಾದಾರ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ.

ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದ ಸಿದ್ದಪ್ಪ ಅವರಿಗೆ ನಿವೃತ್ತಿ ಹಣ ಬಂದಿತ್ತು. ಗ್ರಾಮದಲ್ಲೂ ಆಸ್ತಿ ಹೊಂದಿದ್ದರು. ಈ ಆಸ್ತಿಯಲ್ಲಿ ಪಾಲು ನೀಡುವಂತೆ ಪುತ್ರಿ ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಆದರೆ ಸಿದ್ದಪ್ಪ ಇದಕ್ಕೆ ಒಪ್ಪಿರಲಿಲ್ಲ.

ಇದೇ ವೇಳೆ ಪ್ರಿಯಾಂಕಾ ಆಟೋ ಚಾಲಕ ಸಂತೋಷ್ ಸಿಂಧೆ ಜೊತೆ ಸಂಬಂಧ ಹೊಂದಿದ್ದಳು ಎನ್ನಲಾಗಿದ್ದು, ಇದಕ್ಕೆ ಸಿದ್ದಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆಸ್ತಿ ಹಾಗೂ ಈ ಸಂಬಂಧದ ವಿಚಾರವಾಗಿ ತಂದೆ-ಮಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಆಗಸ್ಟ್ 15ರಂದು ಮತ್ತೊಮ್ಮೆ ಇದೇ ವಿಚಾರಕ್ಕೆ ಜಗಳ ನಡೆದಿದೆ. ಬಳಿಕ ಪ್ರಿಯಾಂಕಾ ತನ್ನ ಪ್ರಿಯಕರ ಸಂತೋಷ್‌ನನ್ನು ಕರೆಸಿಕೊಂಡಿದ್ದಾಳೆ. ಇಬ್ಬರೂ ಸೇರಿ ಸಿದ್ದಪ್ಪ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ನಂತರ ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆಯನ್ನು ಖಚಿತಪಡಿಸಿಕೊಂಡು, ಮೃತದೇಹವನ್ನು ರಸ್ತೆ ಬದಿಗೆ ಎಸೆದು ಪರಾರಿಯಾಗಿದ್ದರು ಎಂಬ ಸ್ಫೋಟಕ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ಪ್ರಿಯಾಂಕಾ ಹಾಗೂ ಸಂತೋಷ್ ಪೊಲೀಸರ ವಶದಲ್ಲಿದ್ದು, ಕೃತ್ಯಕ್ಕೆ ಸಹಕರಿಸಿದ್ದಾನೆ ಎನ್ನಲಾದ ಗುರುರಾಜ ಬಿರಾದಾರ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img