ಕ್ಷಯಮಿತ್ರರನ್ನಾಗಿ ಮಾಡಿಕೊಳ್ಳಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ರೋಟರಿ ಸಂಸ್ಥೆ ಗದಗ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಗದಗ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಗದಗ ಇವರುಗಳ ಸಂಯುಕ್ತಾಶ್ರಯದಲ್ಲಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

Advertisement

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಕಂಡುಬಂದ ಎಲ್ಲಾ ಕ್ಷಯರೋಗಿಗಳಿಗೆ ಚಿಕಿತ್ಸೆ ಪ್ರಾರಂಭದಿಂದ ಹಿಡಿದು ಚಿಕಿತ್ಸೆ ಪೂರ್ಣಗೊಳ್ಳುವವರೆಗೆ ಪ್ರತಿ ತಿಂಗಳು ಪೌಷ್ಠಿಕ ಆಹಾರ ಕಿಟ್‌ಗಳನ್ನು ಕೊಟ್ಟು ಕ್ಷಯಮಿತ್ರರನ್ನಾಗಿ ಮಾಡಿಕೊಂಡು ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕಾರ ಅತೀ ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಡಾ. ಆರ್.ಬಿ. ಉಪ್ಪಿನ ಉಪಸ್ಥಿತರಿದ್ದು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಆರೋಗ್ಯ ದೃಷ್ಟಿಯಿಂದ ಜನಸೇವೆಗೆ ನಮ್ಮ ಸಂಸ್ಥೆಯು ಸದಾ ಸಿದ್ಧವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾಚಾರ್ಯ ಹೊಸಳ್ಳಿಮಠ, ಶ್ರೀಧರ ಸುಲ್ತಾನಪುರ, ಡಾ. ಸತೀಶ ಘಾಟಗೆ, ಡಾ. ಪ್ರೀತ ಕೋನಾ, ಅಶ್ವತ್ಥರೆಡ್ಡಿ ಎನ್.ಟಿ, ರೇಣುಕಾ ಪಿ ಸೇರಿದಂತೆ ಎಲ್ಲ ಎನ್‌ಟಿಇಪಿ ಸಿಬ್ಬಂದಿಯವರು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಪಿ. ಮೋದಿನ್ನವರ ನಿರೂಪಿಸಿದರು.


Spread the love

LEAVE A REPLY

Please enter your comment!
Please enter your name here