HomeGadag Newsಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತುಬದ್ಧ ಆಚರಣೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತುಬದ್ಧ ಆಚರಣೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜನವರಿ 26ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತುಬದ್ಧ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಗಣರಾಜ್ಯೋತ್ಸವ ದಿನದಂದು ಸರ್ಕಾರ ರಜೆ ನೀಡುವುದು ಗಣರಾಜ್ಯೋತ್ಸವ ಆಚರಣೆಗಾಗಿ ಎಂಬುದನ್ನು ಅಧಿಕಾರಿಗಳು ಹಾಗೂ ಇಲಾಖಾ ಸಿಬ್ಬಂದಿಗಳು ಗಮನದಲ್ಲಿಟ್ಟುಕೊಂಡು ಗಣರಾಜ್ಯೋತ್ಸವ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲು ಒಗ್ಗಟ್ಟಾಗಿ ಪಾಲ್ಗೊಳ್ಳಬೇಕು. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಿಗ್ಗೆ 7.30ರೊಳಗೆ ನೆರವೇರಿಸಿ ಬೆಳಿಗ್ಗೆ 8.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಗಣರಾಜ್ಯೋತ್ಸವ ದಿನಾಚರಣೆಯ ಕುರಿತಂತೆ ಕಳೆದ ವರ್ಷದ ಸಭಾ ನಡುವಳಿಯ ಅಂಶಗಳನ್ನು ಸಭೆಯ ಮುಂದಿಡುತ್ತಾ, ಪ್ರಸಕ್ತ ವರ್ಷ ವಿವಿಧ ಇಲಾಖಾಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ತಿಳಿಸಿದರು.

ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಪರೇಡ್, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ವೇದಿಕ ನಿರ್ಮಾಣ, ಆಸನದ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಲೋಕೋಪಯೋಗಿ ಇಲಾಖೆಯ ಕಾರ್ಯಕಾರಿ ಅಭಿಯಂತರರಾದ ರಮೇಶ ಪಾಟೀಲ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ. ಇಲಾಖಾಧಿಕಾರಿಗಳಿಗೆ ಗಣರಾಜ್ಯೋತ್ಸವದ ಆಚರಣೆ ಕುರಿತಂತೆ ವಹಿಸಲಾಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಸೂಚಿಸಿದರು.

ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕಾರ್ಯಕ್ರಮ ಮುಗಿದ ನಂತರವೂ ಸಹ ಆ ಸ್ಥಳ ಮೊದಲಿನ ಹಾಗೆ ಸ್ವಚ್ಛವಾಗಿರುವಂತೆ ಸಂಬಂಧಿತ ಅಧಿಕಾರಿಗಳು ನಿಗಾ ವಹಿಸಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಸಮಯ ಮುಂಚಿತವಾಗಿ ತಲುಪಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು.

– ಸಿ.ಎನ್. ಶ್ರೀಧರ್.

ಜಿಲ್ಲಾಧಿಕಾರಿಗಳು, ಗದಗ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!