HomeDharwadಕುಷ್ಠರೋಗ ಪತ್ತೆ ಅಭಿಯಾನ ಯಶಸ್ವಿಗೊಳಿಸಿ

ಕುಷ್ಠರೋಗ ಪತ್ತೆ ಅಭಿಯಾನ ಯಶಸ್ವಿಗೊಳಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ-2025 ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಧಾರವಾಡ ಜಿಲ್ಲೆಯಾದ್ಯಂತ ನವೆಂಬರ್ 24ರಿಂದ ಡಿಸೆಂಬರ್ 9ರವರೆಗೆ ಅಭಿಯಾನ ರೂಪದಲ್ಲಿ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸಭೆಯಲ್ಲಿ ಸೂಚಿಸಿದರು.

ಕಳೆದ 5 ವರ್ಷಗಳಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬಂದ ಗ್ರಾಮ, ವಾರ್ಡ್‌ಗಳನ್ನು ಆಯ್ದುಕೊಂಡು ಸಮೀಕ್ಷೆ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನೊಳಗೊಂಡು ಜಿಲ್ಲೆಯಾದ್ಯಂತ ಒಟ್ಟು 1,114 ತಂಡಗಳನ್ನು ರಚಿಸಿ, 13,76,418 ಜನಸಂಖ್ಯೆಯನ್ನು ಸಮೀಕ್ಷೆಗೊಳಪಡಿಸಲು ಯೋಜಿಸಲಾಗಿದೆ. ಸಮೀಕ್ಷೆಯ ಪ್ರತಿ ತಂಡದಲ್ಲಿ ಒಬ್ಬ ಮಹಿಳಾ ಸ್ವಯಂಸೇವಕರು ಹಾಗೂ ಒಬ್ಬ ಪುರುಷ ಸ್ವಯಂಸೇವಕರು ಕಾರ್ಯನಿರ್ವಹಿಸುವರು.
ಮನೆ-ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ನಾಗರಿಕರನ್ನು ಪರೀಕ್ಷಿಸಲು ಯೋಜಿಸಲಾಗಿದೆ. ಸಮೀಕ್ಷೆಯಲ್ಲಿ ಕುಷ್ಠರೋಗಿಗಳನ್ನು ಕಂಡುಹಿಡಿದು ಭಾರತ ಸರ್ಕಾರದ ಗುರಿಯಂತೆ ಜಿಲ್ಲೆಯನ್ನು ಕುಷ್ಠ ಮುಕ್ತವನ್ನಾಗಿಸಲು ಪಣತೊಡಲು ಎಲ್ಲ ಇಲಾಖೆಗಳೂ ಸಹಭಾಗಿತ್ವ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿ, ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!