ಕೇರಳ: ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದು, ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ (40) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು,
Advertisement
ಕನಕಪುರ ನಿವಾಸಿಯಾಗಿದ್ದಾನೆ. ಕುಮಾರಸ್ವಾಮಿ ಅವರು ಮೂರು ದಿನದ ಹಿಂದೆ ಶಬರಿಮಲೆಗೆ ತೆರಳಿದ್ದರು. ಈ ವೇಳೆ ದೇವಸ್ಥಾನದ ಸನ್ನಿಧಾನದಿಂದ ಮಲ್ಲಿಕ್ ಪುರಂಗೆ ಸಂಪರ್ಕಿಸುವ ಮೇಲ್ಸೇತುವೆ ಮೇಲಿಂದ ಕೆಳಗೆ ಜಿಗಿದಿದ್ದಾರೆ. ಆತ್ಮಹತ್ಯೆ ಎಂದು ತಿಳಿದು ಬಂದಿದ್ದು,
ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಇನ್ನೂ ಘಟನೆ ಸಂಬಂಧ ಕೇರಳ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ.