ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅನಾಥಾಶ್ರಮವೊಂದರಲ್ಲಿ ಎರಡು ದಿನಗಳ ಹಿಂದೆ ಫುಡ್ ಪಾಯ್ಸನಿಂಗ್ ಪರಿಣಾಮ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಅಲ್ಲದೇ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ರಾತ್ರಿ ಮತ್ತೋರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎರಡಕ್ಕೇರಿದೆ. 12 ವರ್ಷದ ನಾಮೀಬಂತೈ ಮೃತ ವಿದ್ಯಾರ್ಥಿ.
ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಪರಿಣಾಮ ಅಸ್ವಸ್ಥಗೊಂಡಿದ್ದ 38 ವಿದ್ಯಾರ್ಥಿಗಳನ್ನ ಮಂಡ್ಯ ಮಿಮ್ಸ್ ಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರನ್ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ವಿದ್ಯಾರ್ಥಿ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸಾವಿನಿಂದ ಆತಂಕ ಹೆಚ್ಚಾಗಿದ್ದು, ಮಿಮ್ಸ್ ನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ.