ಮಂಗಳೂರು: ಕ್ಯಾಬ್ ಚಾಲಕನಿಗೆ ಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ನಿಂದನೆ ಮಾಡಿರುವ ಆರೋಪದ ಮೇಲೆ ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಅವರ ಮೇಲೆ ಇದ್ದು,
ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಅ.9 ರಂದು ಈ ಮೂವರು ಆ್ಯಪ್ ಮೂಲಕ ಮಂಗಳೂರಿನ ಬಿಜೈಗೆ ಕ್ಯಾಬ್ ಬುಕ್ ಮಾಡಿದ್ದರು. ಅಹ್ಮದ್ ಶಫೀಕ್ ಎಂಬವರು ಕರೆ ಮಾಡಿ ವಿಚಾರಿಸಿದ್ದರು.
ಈ ವೇಳೆ ಹಿಂದಿ, ಮಲಯಾಳಂ ಭಾಷೆಯಲ್ಲಿ ಮಾತನಾಡಿದ ಆರೋಪಿಗಳು, ನೀನು ಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ಅವಾಚ್ಯವಾಗಿ ಬೈದಿದ್ದಾರೆ ಎಂದು ಈ ಬಗ್ಗೆ ಕ್ಯಾಬ್ ಚಾಲಕ ಅಹ್ಮದ್ ಶಫೀಕ್, ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀರು ಇಬ್ಬರನ್ನು ಬಂಧಿಸಿದ್ದು,
ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಿಎನ್‌ಎಸ್ 352, 353(2) ಅಡಿ ಪ್ರಕರಣ ದಾಖಲಾಗಿದೆ. ಕೇರಳದ ಪ್ರಸಿದ್ಧ ನಟನಿಗೆ ಪೊಲೀಸರ ಗ್ರಿಲ್ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ನಟನ ವಾಯ್ಸ್ ಸ್ಯಾಂಪಲ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ.