ಬೆಂಗಳೂರು:- ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಇಂದು ಮದ್ಯಾಹ್ನ ನೇಣು ಬಿಗಿದುಕೊಂಡು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮತ್ತಿಕೆರೆಯಲ್ಲಿ ನಡೆದಿದೆ.
Advertisement
ಮಲ್ಲೇಶ್ವರದ ಬಿಜೆಪಿ ಮಂಡಲಕ್ಕೆ ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳ ನೇಮಕವಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ, ಮಾನಸಿಕವಾಗಿ ನೊಂದಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.