ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿಯಾಗಲು ಅರ್ಹರು ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಯಾಗಲು ಅರ್ಹ ವ್ಯಕ್ತಿ ಎಂದು ಹೇಳಿದರು.
ಖರ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ, ಅವರನ್ನು ಎಐಸಿಸಿ ಅಧ್ಯಕ್ಷ ಮಾಡಬೇಕೆಂದು ಹೇಳಿದ್ದು ತಾನು ಮತ್ತು ಪ್ರಧಾನ ಮಂತ್ರಿಯಾಗಲು ಅರ್ಹ ವ್ಯಕ್ತಿಯೆಂದು ಬೆಳಗಾವಿ ಅಧಿವೇಶನದಲ್ಲಿ ತಾನು ಹೇಳಿರುವ ದಾಖಲೆ ಇದೆ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿದ್ಧರಾಮಯ್ಯ ಅವರು ಐದು ವರ್ಷ ಸಿಎಂಆಗಿ ಮುಂದುವರೆಯುತ್ತಾರೆ. ಇನ್ನೂ 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಇರ್ತಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.