ಹನಿಟ್ರ್ಯಾಪ್ ಜಟಾಪಟಿ ಬೆನ್ನಲ್ಲೇ ದಿಢೀರ್ ಸಿಎಂ ಮನೆಗೆ ಮಲ್ಲಿಕಾರ್ಜುನ ಖರ್ಗೆ ಭೇಟಿ!

0
Spread the love

ಬೆಂಗಳೂರು:- ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಅವರು ಹಾರೈಸಿದರು.

Advertisement

ಇದೇ ವೇಳೆ ಸಚಿವರಾದ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು. ಒಂದೆಡೆ ರಾಜ್ಯದಲ್ಲಿ ಹನಿಟ್ರ್ಯಾಪ್‌ ಜಟಾಪಟಿ ಜೋರಾಗಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್‌ ಅಧಿವೇಶನದ ಕೊನೆಯ ದಿನ ಸಚಿವ ಕೆ.ಎನ್‌ ರಾಜಣ್ಣ ಅವರು, ತಮ್ಮ ವಿರುದ್ಧ ಹನಿಟ್ರ್ಯಾಪ್‌ ಯತ್ನ ನಡೆದಿರುವುದಾಗಿ ಹೇಳಿಕೆ ನೀಡಿದ್ದರು. ರಾಜಣ್ಣ ಅವರ ಈ ಹೇಳಿಕೆ ಬಳಿಕ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಜೋರಾಗಿದೆ. ಈ ನಡುವೆ ಸಿಎಂ ಅವರನ್ನು ಖರ್ಗೆ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಖರ್ಗೆ ಅವರು ಭೇಟಿ ಮಾಡಿದ ಸಂದರ್ಭದಲ್ಲೇ ಮುಖ್ಯಮಂತ್ರಿಗಳು ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಚರ್ಚಿಸಿದ್ದಾರೆ. ಘಟನೆಯ ಎಲ್ಲಾ ವಿವರವನ್ನು ಸಿಎಂ, ಎಐಸಿಸಿ ಅಧ್ಯಕ್ಷರಿಗೆ ನೀಡಿದ್ದಾರೆ. ಜೊತೆಗೆ ರಾಜಣ್ಣ ಅವರು ತಮ್ಮ ಬಳಿ ಹಂಚಿಕೊಂಡ ಮಾಹಿತಿಯನ್ನು ಖರ್ಗೆ ಅವರಿಗೆ ತಿಳಿಸಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


Spread the love

LEAVE A REPLY

Please enter your comment!
Please enter your name here