ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಸಿಎಂ ಆಗ್ತಾರೆ: ಯತ್ನಾಳ್ ಹೊಸ ಬಾಂಬ್

0
Spread the love

ಬೆಳಗಾವಿ:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದೆ ಕರ್ನಾಟಕದ ಸಿಎಂ ಆಗ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಡಿಕೆಶಿಯನ್ನ ಸಿಎಂ ಮಾಡ್ತೀನಿ ಅಂತ ನೀವು ಡಿಸೈಡ್ ಮಾಡಿದ್ರೆ, ನಾನು ಸತೀಶ್ ಪರವಾಗಿ ನಿಲ್ತೀನಿ ಅಂತ ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ. ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ ಸಿಎಂ ಸಿದ್ದರಾಮಯ್ಯ ಯತ್ನಾಳ್ ಆರೋಪ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here