ನವದೆಹಲಿ:- ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಸೂಲಿಬೆಲೆ ವಿರುದ್ಧ ದಾಖಲಾದ ಕೇಸ್ ಇದೀಗ ರದ್ದಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಕರೆದಿದ್ದಕ್ಕಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ಕರ್ನಾಟಕ ಹೈಕೋರ್ಟ್‌ನ 2024ರ ಸೆಪ್ಟೆಂಬರ್ 27ರ ಆದೇಶ ಪ್ರಶ್ನಿಸಿ ಸೂಲಿಬೆಲೆ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರ ಪೀಠವು ಈ ಆದೇಶ ನೀಡಿತು.
ಸೂಲಿಬೆಲೆ ಹೇಳಿದ್ದೇನು?
ರಾಯಚೂರು ಜಿಲ್ಲೆಯ ಸಿರಾವರದಲ್ಲಿ ಯುವ ಬ್ರಿಗೇಡ್ ವತಿಯಿಂದ 2024ರ ಜನವರಿ 18ರಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ ಅವರು ಖರ್ಗೆ ಅವರನ್ನು ಅಯೋಗ್ಯ ಎಂದು ಕರೆದಿದ್ದರು. ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.