ಹುಬ್ಬಳ್ಳಿ: ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಮಮತಾ ಬ್ಯಾನರ್ಜಿ ಸಮರ್ಥರಿಲ್ಲ, ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ.
Advertisement
ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದು ಜೋಶಿ ತಿಳಿಸಿದರು. ದೆಹಲಿ ಸಿಎಂ ಆಗಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದರು.