ಮಡಿಕೇರಿ:- ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿ ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
55 ವರ್ಷದ ರಂಜು ತಿಮ್ಮಯ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



