ಬೆಂಗಳೂರು:- ವ್ಯಕ್ತಿಯೋರ್ವ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಮ್ಮ ಮೆಟ್ರೋ ಕೆಂಗೇರಿ ಸ್ಟೇಷನ್ನಲ್ಲಿ ಜರುಗಿದೆ.
ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋ ರೈಲುಗಳು ವೈಟ್ಫೀಲ್ಡ್ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್ಸಿಎಲ್ ಕೋರಿದೆ


