HomeKarnataka Newsಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿಗೆ ವ್ಯಕ್ತಿ ಬಲಿ; ಶವ ಹೂತು ಹಾಕಿದ್ದ ಮೂವರು ಅರೆಸ್ಟ್

ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿಗೆ ವ್ಯಕ್ತಿ ಬಲಿ; ಶವ ಹೂತು ಹಾಕಿದ್ದ ಮೂವರು ಅರೆಸ್ಟ್

For Dai;y Updates Join Our whatsapp Group

ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಕರಿಯಪ್ಪ (55) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ವಿಷಯ ಹೊರಬಾರದಂತೆ ಶವವನ್ನು ಗುಟ್ಟಾಗಿ ಹೂತು ಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬವರು ಕಾಡುಹಂದಿ ಬೇಟೆಯಾಡುವ ಉದ್ದೇಶದಿಂದ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಅಲ್ಲಿಗೆ ತೆರಳಿದ್ದ ಕರಿಯಪ್ಪ ಅವರು ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಿಂದ ಆತಂಕಗೊಂಡ ಆರೋಪಿಗಳು, ಪ್ರಕರಣದಿಂದ ತಪ್ಪಿಸಿಕೊಳ್ಳಲು ಕರಿಯಪ್ಪ ಅವರ ಶವವನ್ನು ಯಾರಿಗೂ ತಿಳಿಯದಂತೆ ಹೂತು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ.

ಇತ್ತ ಕರಿಯಪ್ಪ ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ಯಾವುದೇ ಸುಳಿವು ಸಿಗದಿದ್ದಾಗ ಯಗಟಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಘಟನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿದೆ. ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ಸತ್ಯಾಂಶ ಬೆಳಕಿಗೆ ಬಂದಿದೆ.

ಘಟನೆ ಖಂಡಿಸಿ ಗ್ರಾಮಸ್ಥರು ಯಗಟಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಸದ್ಯ ಮೂವರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img