ಚಿಕ್ಕಬಳ್ಳಾಪುರ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ನಡೆದಿದೆ. ಕ್ಷ್ಮಿಪತಿ (40) ಮೃತ ವ್ಯಕ್ತಿಯಾಗಿದ್ದು,
ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್ ಮಾಡುತ್ತಿದ್ದರು.
ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.



