ರಾಯಚೂರು:- ಲಿಂಗಸುಗೂರು ತಾಲೂಕಿನ ಯರಗುಂಟಿಯಲ್ಲಿ ಮೊಹರಂ ಆಚರಣೆ ವೇಳೆ ಬೆಂಕಿಗೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
Advertisement
ಹನುಮಂತ ಗಾಯಗೊಂಡ ವ್ಯಕ್ತಿ. ಹಬ್ಬದ ಸಡಗರದಲ್ಲಿದ್ದಾಗ ಅವರು ಹಲಾಯಿ ಕುಣಿಗೆ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಗಾಯಾಳುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.