ಮಂಗಳೂರು: ಬೀದಿನಾಯಿ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಬೈಪಾಸ್ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ದಯಾನಂದ (60) ಮೃತ ವ್ಯಕ್ತಿಯಾಗಿದ್ದು, ಅವಿವಾಹಿತರಾಗಿದ್ದ ದಯಾನಂದ, ಕುಡಿತದ ಚಟ ಹೊಂದಿದ್ದು,
Advertisement
ರಾತ್ರಿ ವೇಳೆ ಸ್ಥಳೀಯವಾಗಿ ನೇಮ, ಕೋಲ, ಜಾತ್ರೆಗಳಿಗೆ ತೆರಳಿ ಕುಂಪಲದ ಅಂಗಡಿ ಮುಂಭಾಗ ಮಲಗಿ ಬೆಳಗ್ಗಿನ ವೇಳೆ ಮನೆ ಸೇರುತ್ತಿದ್ದರು.
ಆದ್ರೆ ಇಂದು ಮುಂಜಾನೆ 3:30ರ ವೇಳೆಗೆ ಅವರ ಮೇಲೆ ಬೀದಿನಾಯಿ ದಾಳಿ ಮಾಡಿವೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸೋಕೋ ಟೀಮ್ ಸಹ ಪರಿಶೀಲನೆ ನಡೆಸಿದೆ. ಬೆಳಗ್ಗಿನ ಜಾವ ನಾಯಿ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


