ದಾವಣಗೆರೆ: ಚಾಕುವಿನಿಂದ ಇರಿದು ಓರ್ವ ವ್ಯಕ್ತಿಯನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಜಾವೀದ್ (25) ಕೊಲೆಯಾದ ದುರ್ದೈವಿಯಾಗಿದ್ದು,
Advertisement
ಗಾರೆ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದ ಜಾವೀದ್ ರನ್ನು ಗ್ರಾಮದ ಹೊರ ಭಾಗದಲ್ಲಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಸದ್ಯ ಚನ್ನಗಿರಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.