ಹಾಸನ: ಹಾಸನ ಮೂಲದ ಯುವಕ-ಯುವತಿಯರು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್ ಸಾವನ್ನಪ್ಪುತ್ತಿದ್ದಾರೆ. ಹೌದು ಇದೀಗ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
Advertisement
ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿಯಾಗಿದ್ದು, ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ.
ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹದಿನೇಳು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.