ತುಮಕೂರು:ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸುದ್ದಿಗಳನ್ನು ಕೇಳುತ್ತಲೇ ಇರುತ್ತೇವೆ.
Advertisement
ಇದೀಗ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗ ವ್ಯಕ್ತಿಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ. ಶಿರಾ ತಾಲೂಕಿನ ಬರಗೂರು ಮೂಲದ ನಾಗರಾಜ್ (57) ಸಾವನ್ನಪ್ಪಿದ ದುರ್ಧೈವಿಯಾಗಿದ್ದು,
ಎಲ್‌ಎನ್‌ಪಿ ಬ್ರಿಕ್ಸ್ನ ಮಾಲೀಕರಾದ ನಾಗರಾಜು ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಮಂಗಳವಾರ ಸಾಯಂಕಾಲ ತ್ರಿವೇಣಿ ಸಂಗಮದಲ್ಲಿ ಸಂಧ್ಯಾ ವಂದನೆ ಮಾಡಿ ಪುಣ್ಯಸ್ನಾನ ಮಾಡುತ್ತಿರುವಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.