HomeKarnataka Newsಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತ: ಮಂಡ್ಯದ ಕೃಷಿ ಅಧಿಕಾರಿ ಸಾವು

ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತ: ಮಂಡ್ಯದ ಕೃಷಿ ಅಧಿಕಾರಿ ಸಾವು

For Dai;y Updates Join Our whatsapp Group

ಮಂಡ್ಯ: ಕುಟುಂಬದವರೊಂದಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಮಂಡ್ಯದ ಕೃಷಿ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಸಕಲೇಶಪುರದ ಬಳಿ ನಡೆದಿದೆ.

ಮೃತರನ್ನು ಚಂದ್ರೇಶ್ ಎಂ.ಎಸ್. (48) ಎಂದು ಗುರುತಿಸಲಾಗಿದೆ. ಮಂಡ್ಯದ ರಾಜ್ಯ ಪೀಡೆನಾಶಕ ಪರಿವೀಕ್ಷಣಾ ಪ್ರಯೋಗಾಲಯದಲ್ಲಿ ಕೃಷಿ ಅಧಿಕಾರಿಯಾಗಿ ಚಂದ್ರೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು.

ಕುಟುಂಬದವರೊಂದಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸಕಲೇಶಪುರದ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಗಿದ್ದು, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚಂದ್ರೇಶ್ ಅವರ ನಿಧನಕ್ಕೆ ಕೃಷಿ ಇಲಾಖೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೃತ ಅಧಿಕಾರಿಯ ಅಂತ್ಯ ಸಂಸ್ಕಾರವು ನಾಳೆ ಪಾಂಡವಪುರ ತಾಲೂಕಿನ ಮಾಣಿಕನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img