ಮಂಡ್ಯ:- ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ರೈಲ್ವೆ ಟ್ರಾಕ್‌ನಲ್ಲಿ ಅವಘಡ ಸಂಭವಿಸಿದೆ. ರೈಲಿಗೆ ಸಿಲುಕಿ 17 ಕುರಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಹೊಸಬೂದನೂರು ಗ್ರಾಮದ ಜಯಮ್ಮ ಅವರಿಗೆ ಸೇರಿದ ಕುರಿ ಮೃತಪಟ್ಟಿದ್ದು, ಸುಮಾರು 2 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ. ಇಂದು ಸಂಜೆ ನಾಯಿಗಳು ಅಟ್ಟಾಡಿಸಿದ ವೇಳೆ ಕುರಿಮಂದೆ ಚದುರಿದ ಪರಿಣಾಮ 17 ಕುರಿಗಳು ರೈಲ್ವೆ ಹಳಿ ದಾಟಲೆತ್ನಿಸಿವೆ. ಈ ವೇಳೆ ಬಂದ ರೈಲು 17 ಕುರಿಗಳ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ. ಕುರಿ ಕಳೆದುಕೊಂಡ ಮಹಿಳೆಯ ಅಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.