ಮಂಡ್ಯ: ಮಂಡ್ಯ ಜಿಲ್ಲಾ ಪಾಂಡವಪುರ ತಾಲ್ಲೂಕಿನ ಡಿಂಕಾ ಗ್ರಾಮದಲ್ಲಿ ಭೀಕರ ದೌರ್ಜನ್ಯ ಘಟನೆ ನಡೆದಿದೆ.
ಫೆಬ್ರವರಿ 22ರಂದು ಮಧ್ಯಾಹ್ನ 3 ಗಂಟೆಗೆ, ಸ್ಥಳೀಯ ವ್ಯಕ್ತಿಯೊಬ್ಬರು ಬೈಕ್‌ನಲ್ಲಿ ಚಿನಕುರಳಿ ಕಡೆ ಸಾಗುತ್ತಿದ್ದಾಗ ಗಿರೀಶ್, ಮಂಜು (ಅಲಿಯಾಸ್ ಪ್ಲಗ್), ಜೀವನ್, ಶಶಿಕುಮಾರ, ಅಯ್ಯಪ್ಪ, ಮದನ್, ಮಾದಪ್ಪ, ರವಿ, ನಿಂಗಣ್ಣ ಮತ್ತು ಗಣೇಶ ಸೇರಿದಂತೆ ಹತ್ತಾರು ಮಂದಿ ಕೈಯಲ್ಲಿ ಕಲ್ಲು ಮತ್ತು ದೊಣ್ಣೆ ಹಿಡಿದು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ.
ಘಟನೆಯ ವೇಳೆ, ವ್ಯಕ್ತಿಯ ಕಾಲು ಮತ್ತು ತಲೆಗೆ ಗಂಭೀರ ಗಾಯಗಳು ಸಂಭವಿಸಿದ್ದು, ಹಲ್ಲೆ ಮಾಡುವ ಕಿಡಿಗೇಡಿಗಳು ಈ ಕ್ರೌರ್ಯವನ್ನು ವಿಡಿಯೋದಲ್ಲಿ ದಾಖಲಿಸಿದ್ದರು. ಸ್ಥಳೀಯರು ಹಾಗೂ ಆಂಬ್ಯುಲೆನ್ಸ್ ಮೂಲಕ ಹಲ್ಲೆಗೀಡಾದ ವ್ಯಕ್ತಿಯನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ತರುವ ಮೂಲಕ ಚಿಕಿತ್ಸೆ ನೀಡಲಾಗಿತ್ತು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ 14 ಆರೋಪಿಗಳ ವಿರುದ್ಧ FIR ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಪೋಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.

