ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮಂಡ್ಯ ಉದ್ಯಮಿ ಹರ್ಷವರ್ಧನ ಕಿಕ್ಕೇರಿ ಆತ್ಮಹತ್ಯೆ..!

0
Spread the love

ವಾಷಿಂಗ್ಟನ್‌: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಉದ್ಯಮಿಯೊಬ್ಬರು ತಮ್ಮ ಪತ್ನಿ ಮತ್ತು ಮಗನನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಷಿಂಗ್ಟನ್‌ನಲ್ಲಿ ನಡೆದಿದೆ. ಮೃತರನ್ನು ಹರ್ಷವರ್ಧನ ಎಸ್ ಕಿಕ್ಕೇರಿ (57), ಶ್ವೇತಾ ಪನ್ಯಂ (44) ಹಾಗೂ ದಂಪತಿಯ 14 ವರ್ಷದ ಮಗ ಎಂದು ಗುರುತಿಸಲಾಗಿದೆ.  ಹರ್ಷವರ್ಧನ ಎಸ್ ಕಿಕ್ಕೇರಿ (57) ಎಂಬ ಉದ್ಯಮಿ ಮೂಲತಃ ಕರ್ನಾಟಕದ ಮಂಡ್ಯ ಜಿಲ್ಲೆಯವರು.

Advertisement

ಟೆಕ್ಕಿ ತಮ್ಮ ವೃತ್ತಿಪರ ಯಶಸ್ಸು ಮತ್ತು ಸ್ಥಿರವಾದ ಕುಟುಂಬ ಜೀವನಕ್ಕೆ ಹೆಸರುವಾಸಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಂಗ್ ಕೌಂಟಿ ಪೊಲೀಸರು 911 ಕರೆಗೆ ಸ್ಪಂದಿಸಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಕಿರಿಯ ಮಗ ಘಟನೆ ನಡೆದಾಗ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಆತ ಸಾವಿನ ದವಡೆಯಿಂದ ಬಚಾವಾಗಿದ್ದಾನೆ.

ಮಂಡ್ಯದ ಕೆ.ಆರ್‌.ಪೇಟೆ ತಾಲ್ಲೂಕಿನ ಕಿಕ್ಕೇರಿಯವರಾದ ಹರ್ಷವರ್ಧನ್‌ ಅವರು ಮೈಸೂರಿನ ಎಸ್‌ಜೆಸಿಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಮೈಕ್ರೋಸಾಫ್ಟ್‌ ನಲ್ಲಿ ಉದ್ಯೋಗಕ್ಕೆ ಸೇರಿದ್ದರು. ನಂತರ ರೋಬೊಟಿಕ್‌ ತಂತ್ರಜ್ಞಾನ ಆಧಾರಿತ ‘ಹೋಲೊವರ್ಲ್ಡ್’ ಹಾಗೂ ‘ಹೋಲೊಸ್ಯೂಟ್‌’ ಕಂಪೆನಿಗಳನ್ನು ಸ್ಥಾಪಿಸಿದ್ದರು. 2022ರ ಕೋವಿಡ್ -19 ಸಮಯದಲ್ಲಿ ಕಂಪನಿಯು ಬಂದ್‌ ಆಗಿತ್ತು. ಬಳಿಕ ಅವರು ಅಮೆರಿಕಕ್ಕೆ ತೆರಳಿದ್ದರು.


Spread the love

LEAVE A REPLY

Please enter your comment!
Please enter your name here