ಮಂಡ್ಯ:- ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಮೈ–ಬೆಂ ದಶಪಥ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿದ್ದ ದಂಪತಿ ತಕ್ಷಣ ಇಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿ ಗ್ರಾಮದ ಕಿರಣ್ ಮತ್ತು ರಂಜಿತ ಎಂಬುವವರೇ ಅಪಾಯದಿಂದ ಪಾರಾದವರು.
ಮಾಹಿತಿ ಪಡೆದ ಮದ್ದೂರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.



