ಮಂಡ್ಯ:- ಕನ್ನಡಕ್ಕೆ ಮಂಡ್ಯ ಜಿಲ್ಲೆಯ ಕೊಡುಗೆ ಅಪಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಕ್ಕರೆ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯನ್ನು ಕೊಂಡಾಡಿದರು.
ನಾನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯಂತ ಖುಷಿಯಿಂದ ಪಾಲ್ಗೊಂಡಿದ್ದೇನೆ. ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೆ ಉತ್ಕೃಷ್ಟವಾದದ್ದು. ಕನ್ನಡಕ್ಕೆ ಮಂಡ್ಯ ಜಿಲ್ಲೆಯ ಕೊಡುಗೆ ಅಪಾರವಾದದ್ದು. ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಕೊಡಲು ಸರ್ಕಾರ ಬದ್ಧವಾಗಿದೆ.
ಸಮಗ್ರ ಕನ್ನಡ ಭಾಷಾ ಬಳಕೆಯನ್ನು ಜಾರಿಗೆ ತಂದಿದ್ದೇವೆ. ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿದುಕೊಳ್ಳಬೇಕಿದೆ. ಎಷ್ಟೇ ಭಾಷೆ ಕಲಿತರೂ ಹೃದಯದ ಭಾಷೆ ಮಾತೃ ಭಾಷೆಯೇ ಆಗಿರುತ್ತದೆ. ಯಾವ ಸಂಪ್ರದಾಯವೂ ಇಕ್ಕಟ್ಟಿಗೆ ಸಿಲುಕಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಉದ್ಘಾಟನಾ ಭಾಷಣದಲ್ಲಿ ಹೇಳಿದರು.