ಮಂಡ್ಯ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ಇರಾನ್ ನಡೆಸುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ದುಬೈನಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ.
ಈ ತಾತ್ಕಾಲಿಕ ಸ್ಥಗಿತದಿಂದಾಗಿ ಹಲವು ಪ್ರಯಾಣಿಕರು ಅಲ್ಲೇ ಸಿಲುಕಿಕೊಂಡಿದ್ದಾರೆ. ಅಂತಹ ಪ್ರಯಾಣಿಕರಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ದುಬೈಗೆ ತೆರಳಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಮತ್ತು ಚಲನಚಿತ್ರ ಮನ್ ಮುಲ್ ನಿರ್ದೇಶಕ ಡಾಲು ರವಿ ಕೂಡ ಕೂಡ ಒಬ್ಬರು..
ಅವರು ದುಬೈನ ಖಾಸಗಿ ಹೋಟೆಲ್ನಲ್ಲಿ ಸುರಕ್ಷಿತವಾಗಿ ಉಳಿದಿದ್ದಾರೆ ಎಂದು ಸ್ಥಳದಿಂದ ವೀಡಿಯೋ ಸಂದೇಶ ಮೂಲಕ ಮಾಹಿತಿ ನೀಡಿದ್ದಾರೆ. ಡಾಲು ರವಿ ಹೇಳುವಂತೆ, ಯುದ್ಧದ ಪರಿಣಾಮ ಮತ್ತು ವಿಮಾನ ಸಂಚಾರ ಸ್ಥಗಿತದ ಕಾರಣವಾಗಿ ಸ್ಥಳದಲ್ಲಿ ಜನರ ನಡುವೆ ಆತಂಕವಾಗಿದೆ, ಆದರೆ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸುರಕ್ಷಿತರಾಗಿದ್ದೇವೆ ಎಂದು ಸ್ಥಳದ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.



